ಬೆಂಗಳೂರು: ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ್ತೆ ಹೋಗುವುದಿಲ್ಲ ಎಂದು ಮಾಜಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಸಂಬಂಧ ಆರ್ ಟಿ ನಗರದಲ್ಲಿ ಮಾತನಾಡಿದ ಅವರು, ನನ್ನನ್ನು ಟಾರ್ಗೆಟ್ ಮಾಡಿದ್ದಕ್ಕೆ ರಾಜ್ಯದಲ್ಲಿ ಇಡೀ ಬಿಜೆಪಿ ಸೋಲುವಂತಾಯಿತು. ಬಿಜೆಪಿ ಪಕ್ಷದ ಎಲ್ಲರೂ ನನ್ನ ವಿರುದ್ಧ ನಿಂತರೂ, ಅದರ ಫಲವಾಗಿ ರಾಜ್ಯದಲ್ಲಿ ಬಿಜೆಪಿ ನೆಲ ಕಚ್ಚಿದೆ. ನಾನು ಬಿಜೆಪಿ ಪಕ್ಷ ಬಿಟ್ಟು ಬಂದಿದ್ದು, ಮುಂದೆ ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ್ತೆ ಹೋಗುವುದಿಲ್ಲ.
ಕಾಂಗ್ರೆಸ್ನಲ್ಲೇ ಮುಂದುವರಿಯುತ್ತೇನೆ. ನಾನು ಪಕ್ಷ ಬಿಟ್ಟು ಹೊರಟಾಗ ಮಾತನಾಡಿಸಬೇಕೆಂಬ ಸಣ್ಣ ಕೆಲಸವನ್ನು ಬಿಜೆಪಿ ಮಾಡಿಲ್ಲ ಎಂದು ಜಗದೀಶ್ ಶೆಟ್ಟರ್ ಬೇಸರ ವ್ಯಕ್ತಪಡಿಸಿದರು. ಚುನಾವಣೆ ಫಲಿತಾಂಶ ಕಳೆದು ನಾನು ಬೆಂಗಳೂರಿಗೆ ಬಂದ ಮೇಲೆ ಸಾಕಷ್ಟು ಕಾಂಗ್ರೆಸ್ ನಾಯಕರು ಮನೆಗೆ ಬಂದು ಮಾತನಾಡಿಸಿ ಹೋಗಿದ್ದಾರೆ. ಡಾ.ಜಿ.ಪರಮೇಶ್ವರ್ ಮಾತನಾಡಿಸಿ ನೀವು ಪಕ್ಷಕ್ಕೆ ಬಂದ ಮೇಲೆ ಒಳ್ಳೆಯದಾಗಿದೆ ಎಂದಿದ್ದರು. ನಾನು ಬಂದ ಮೇಲೆ ಲಿಂಗಾಯತರ ಮತಗಳು ಕೂಡ ಬಂದಿದೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.