ನವದೆಹಲಿ: ವಿರೋಧ ಪಕ್ಷಗಳ ಮೈತ್ರಿ ಕೂಟ ಇಂಡಿಯಾ (INDIA) ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಭಾರತದ ಸಂಸ್ಥೆಗಳನ್ನು ವಶಪಡಿಸಿಕೊಳ್ಳಲು ಬಿಡುವುದಿಲ್ಲ. ಮತ್ತು ಪ್ರಜಾಪ್ರಭುತ್ವದ ಹತ್ಯೆಯನ್ನು ಸಹಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನಾರ್ವೆಯ ಓಸ್ಲೋ ವಿಶ್ವವಿದ್ಯಾಲಯದಲ್ಲಿ ಮಾಡಿದ ಭಾಷಣದಲ್ಲಿ ಹೇಳಿದ್ದಾರೆ.
ಈ ತಿಂಗಳ ಆರಂಭದಲ್ಲಿ ರಾಗಾ ಸಂಸ್ಥೆಗೆ ಭೇಟಿ ನೀಡಿದ ಕ್ಲಿಪ್ಅನ್ನು ಕಾಂಗ್ರೆಸ್ (Congress) ಹಂಚಿಕೊಂಡಿದೆ. ಅದರಲ್ಲಿ ಅವರು ಭಾರತೀಯ ಪ್ರಜಾಪ್ರಭುತ್ವದ ಕೊಲೆಯನ್ನು ನಾವು ಸಹಿಸುವುದಿಲ್ಲ ಎಂದು ನಮ್ಮ ಮೈತ್ರಿಕೂಟದ ಪ್ರತಿಯೊಬ್ಬ ವ್ಯಕ್ತಿಯೂ ಒಪ್ಪಿಕೊಂಡಿದ್ದಾರೆ. ಎರಡನೆಯದಾಗಿ ನಮ್ಮ ಸಾಂಸ್ಥಿಕ ಚೌಕಟ್ಟನ್ನು ಆರ್ಎಸ್ಎಸ್ ವಶಪಡಿಸಿಕೊಳ್ಳಲು ನಾವು ಬಿಡುವುದಿಲ್ಲ ಎಂದು ಪ್ರತಿಯೊಬ್ಬ ವ್ಯಕ್ತಿಯೂ ಅಭಿಪ್ರಾಯಪಟ್ಟಿದ್ದಾರೆ ಎಂದು ರಾಹುಲ್ ಹೇಳಿದರು.
ಭಾರತದಲ್ಲಿ 2-3 ವ್ಯಾಪಾರ ಸಂಸ್ಥೆಗಳ ಏಕಸ್ವಾಮ್ಯವಿದೆ. ಕಳೆದ 9 ವರ್ಷಗಳಲ್ಲಿ 20 ಕೋಟಿ ಜನರು ಬಡತನಕ್ಕೆ ಜಾರಿದ್ದಾರೆ. ಮೂರನೆಯದಾಗಿ ಸರ್ಕಾರ ಆರೋಗ್ಯ ಮತ್ತು ಶಿಕ್ಷಣಕ್ಕಾಗಿ ಹೆಚ್ಚು ಖರ್ಚು ಮಾಡಬೇಕು ಮತ್ತು ತೊಡಗಿಸಿಕೊಳ್ಳಬೇಕು ಎಂದು ನಾವೆಲ್ಲರೂ ಒಪ್ಪುತ್ತೇವೆ. ದಲಿತರು, ಬುಡಕಟ್ಟುಗಳು, ಅಲ್ಪಸಂಖ್ಯಾತರು ಸೇರಿದಂತೆ ಕೆಲವು ಜನರ ಗುಂಪುಗಳು ಭಾರತದ ಬೆಳವಣಿಗೆಯ ಕಥೆಗಳಲ್ಲಿಯೇ ಸೇರಿಸಲಾಗಿಲ್ಲ ಎಂದು ಆರೋಪಿಸಿದರು.