ನವದೆಹಲಿ: ಒಂದೆಡೆ ಸರ್ಕಾರ ರಚಿಸಲು ಎನ್ಡಿಎ ಕಸರತ್ತು ನಡೆಸಿದರೆ, ಇತ್ತ ಕಾಂಗ್ರೆಸ್ನಲ್ಲಿ ವಿಪಕ್ಷ ಸ್ಥಾನವನ್ನು ಯಾರು ಅಲಂಕರಿಸಬಹುದು ಎಂಬುದರ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ವಿಪಕ್ಷ ಸ್ಥಾನ ರಾಹುಲ್ ಗಾಂಧಿಯವರಿಗೆ ಬಹುತೇಕ ಫಿಕ್ಸ್ ಆಗಿದೆ. ರಾಹುಲ್ಗೆ ಮತ್ತೆ ದೊಡ್ಡ ಜವಾಬ್ದಾರಿ ನೀಡಲು ಕಾಂಗ್ರೆಸ್ ನಿರ್ಧಾರ ಮಾಡಿದೆ ಎಂದು ಹೇಳಲಾಗುತ್ತಿದೆ.
ಆದರೆ ಶಶಿತರೂರ್ , ಗೌರವ್ ಗೊಗೋಯ್ ಕೂಡ ವಿರೋಧ ಪಕ್ಷದ ನಾಯಕರಾಗಲು ಆಕಾಂಕ್ಷಿಗಳಾಗಿದ್ದಾರೆ.
ಕಾಂಗ್ರೆಸ್ 52 ಸ್ಥಾನಗಳಿಂದ ಈಗ 99 ಸ್ಥಾನಗಳಿಗೆ ಏರಿಕೆಯಾಗಿರುವುದಕ್ಕೆ ರಾಹುಲ್ ಗಾಂಧಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೇ ಈ ಸ್ಥಾನವನ್ನು ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಈ ಕುರಿತು ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೃತೃತ್ವದಲ್ಲಿ ನಡೆದ ಇಂಡಿಯಾ ಒಕ್ಕೂಟ ಸಭೆಯಲ್ಲಿಯೂ ಚರ್ಚೆ ನಡೆಸಲಾಗಿದೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.