ಬೆಂಗಳೂರು: ಮುಂದಿನ ಎರಡು ಮೂರು ದಿನಗಳಲ್ಲಿ ಹೆಸರುಗಳನ್ನು ಹೈಕಮಾಂಡ್ಗೆ ಕಳಿಸುತ್ತೇವೆ. ಅಕಾಂಕ್ಷಿಗಳ ಹೆಸರುಗಳನ್ನು ಕಳುಹಿಸುವುದು ನಮ್ಮ ಕರ್ತವ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (Vijayendra) ತಿಳಿಸಿದರು.
ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ರಾಜ್ಯ ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿದ ಅವರು, ಯಾವ್ಯಾವ ಹೆಸರುಗಳು ಚರ್ಚೆಯಾಗಿದೆಯೋ ಎಲ್ಲವನ್ನೂ ಕಳುಹಿಸುತ್ತೇವೆ. ಹಾಲಿ ಸಂಸದರ ಹೆಸರುಗಳನ್ನೂ ಒಳಗೊಂಡಂತೆ ಆಕಾಂಕ್ಷಿಗಳ ಹೆಸರನ್ನು ಕಳುಹಿಸಲಾಗುತ್ತದೆ ಎಂದು ಹೇಳಿದರು
ಮುಂದಿನ ಲೋಕಸಭಾ ಚುನಾವಣಾ ದೃಷ್ಟಿಯಿಂದ ಇಂದು ಸಭೆ ಮಾಡಲಾಗಿದೆ. ರಾಜ್ಯದ ಅಷ್ಟು ಲೋಕಸಭಾ ಕ್ಷೇತ್ರಕ್ಕೆ ವೀಕ್ಷಕರು ಹೋಗಿದ್ರು. ವೀಕ್ಷಕರು ಹೇಳಿರೋ ಹೆಸರನ್ನ ನಾವು ಇಂದು ಚರ್ಚೆ ಮಾಡಿದ್ದೇವೆ. ಬಿಜೆಪಿ ಜೆಡಿಎಸ್ ಮೃತ್ರಿಯಾಗಿ ಚುನಾವಣೆ ಎದುರಿಸುತ್ತಿದ್ದೇವೆ. ರಾಜ್ಯದಲ್ಲಿ 28 ಕ್ಕೆ 28 ಕ್ಷೇತ್ರದಲ್ಲೂ ನಮ್ಮ ಅಭ್ಯರ್ಥಿಗಳು ಗೆಲ್ಲುವ ಸಂದರ್ಭವಿದೆ ಎಂದು ಭರವಸೆ ವ್ಯಕ್ತಪಡಿಸಿದರು.