ಸಿಗ್ನಲಿಂಗ್ ಟೆಸ್ಟ್ ಕಾರಣ ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆ ಸ್ಥಗಿತಗೊಂಡಿದೆ. ಹೀಗಾಗಿ ಮಾಹಿತಿ ಕೊರತೆಯಿಂದ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಪರದಾಡುವಂತಾಯಿತು.
ನಾಗಸಂದ್ರದಿಂದ ಪೀಣ್ಯ ಇಂಡಸ್ಟ್ರಿ ಮಧ್ಯೆ ಸಂಚಾರ ಸ್ಥಗಿತವಾಗಿದೆ. ಹೀಗಾಗಿ ಅನೇಕ ಪ್ರಯಾಣಿಕರು ಮೆಟ್ರೋ ಸ್ಟೇಷನ್ಗೆ ಬಂದು ವಾಪಸ್ ಹೋಗುತ್ತಿದ್ದಾರೆ. ಯಾವುದೇ ಮಾಹಿತಿ ಇಲ್ಲದ ಕಾರಣ ಅನೇಕ ಪ್ರಯಾಣಿಕರು ಸ್ಟೇಷನ್ಗೆ ಬಂದು ವಾಪಸ್ ಹೋಗುತ್ತಿದ್ದಾರೆ.
ಆಟೋ ಚಾಲಕರು ದುಪ್ಪಟ್ಟು ದರ ವಸೂಲಿಗೆ ಮುಂದಾದ ಬೆನ್ನಲ್ಲೇ ಮೆಟ್ರೋ ಪ್ರಯಾಣಿಕರಿಗಾಗಿ ಬಿಎಂಟಿಸಿ ಬಸ್ಸುಗಳ ವ್ಯವಸ್ಥೆ ಮಾಡಲಾಗುತ್ತಿದೆ. ಬಿಎಂಆರ್ಸಿಎಲ್ ಹತ್ತು ಮೆಟ್ರೋ ಫೀಡರ್ ಬಸ್ಗಳ ವ್ಯವಸ್ಥೆ ಮಾಡಿದೆ.
ಮೆಟ್ರೋ ಸಂಚಾರ ಸ್ಥಗಿತದ ಬಗ್ಗೆ ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿತ್ತು. ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ಆಗಸ್ಟ್ 20, 23 ಮತ್ತು 30 ಹಾಗೂ ಸೆಪ್ಟೆಂಬರ್ 6 ಮತ್ತು 11 ರಂದು ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಬಿಎಂಆರ್ಸಿಎಲ್ ತಿಳಿಸಿತ್ತು.