ಕಲಬುರ್ಗಿ ;- ನಿರಂತರ ಮಳೆಗೆ ಮಣ್ಣಿನ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ ಘಟನೆ ಜೇವರ್ಗಿ ತಾಲೂಕಿನ ಬಿರಾಳ್ ಬಿ ಗ್ರಾಮದಲ್ಲಿ ಜರುಗಿದೆ.
ಬಸಮ್ಮಾ ಬಸವರಾಜ್ ಮೃತ ಮಹಿಳೆ. ಸಂಜೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದಿಢೀರನೆ ಮನೆಯ ಗೋಡೆ ಕುಸಿದು ದುರಂತ ಸಂಭವಿಸಿದೆ. ಮೃತ ಮಹಿಳೆಯೊಂದಿಗೆ ಮಗು ಕೂಡ ಇದ್ದು, ಅದೃಷ್ಟವಶಾತ್ ಪಾರಾಗಿದೆ. ಮೃತ ಬಸಮ್ಮ ಅವರ ಮನೆ ಮಣ್ಣು ಮತ್ತು ಕಲ್ಲಿನಿಂದ ನಿರ್ಮಾಣ ಮಾಡಲಾಗಿತ್ತು. ನಿರಂತರ ಮಳೆಯಿಂದ ಗೋಡೆ ತೇವಗೊಂಡು, ಕುಸಿದು ಬಿದ್ದಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ರಾಜಕಾಲುವೆ ಒತ್ತುವರಿ ತೆರವು ಮಾಡದ ಬಿಬಿಎಂಪಿ- ಪಾಲಿಕೆ ವಿರುದ್ಧ ಹೈಕೋರ್ಟ್ ಅಸಮಾಧಾನ