ಇಂಫಾಲ್ ;- ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯ ಮೊದಲ ಫೋಟೋ ರಿಲೀಸ್ ಮಾಡಲಾಗಿದೆ.
ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘಟನೆ ಮಣಿಪುರದಲ್ಲಿ ನಡೆದಿತ್ತು.
ಮಹಿಳೆಯರಿಬ್ಬರನ್ನು ಬೆತ್ತಲುಗೊಳಿಸಿ, ಮೆರವಣಿಗೆ ಮಾಡಿದ್ದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಎರಡು ತಿಂಗಳ ಹಿಂದೆ ನಡೆದಿದೆ ಎನ್ನಲಾದ ಈ ಘಟನೆಯ ತಡವಾಗಿ ಬೆಳಕಿಗೆ ಬಂದಿದೆ. ಇದಕ್ಕೆ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಈ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು ವಿಡಿಯೋದಲ್ಲಿ ಕಂಡುಬಂದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಇಬ್ಬರು ಮಹಿಳೆಯರನ್ನು ಹಿಡಿದುಕೊಂಡು ಬಂದಿದ್ದ ಗುಂಪಿನಲ್ಲಿ ಒಬ್ಬಾತ ಮಹಿಳೆಯನ್ನು ಹಿಡಿದುಕೊಂಡಿದ್ದ. ಈತನನ್ನು 32 ವರ್ಷದ ಹುಯಿರೆಮ್ ಹೆರೋಡಾಸ್ ಮೈತೇಯಿ ಎಂದು ಗುರುತಿಸಲಾಗಿದ್ದು, ಈಗಾಗಲೇ ಬಂಧಿಸಲಾಗಿದೆ. ತೌಬಲ್ ಜಿಲ್ಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಶಾಮೀಲಾದ ಎಲ್ಲರನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.