ಏಷ್ಯಾ ಕಪ್ ಟೂರ್ನಿಯ ಶ್ರೀಲಂಕಾ ವಿರುದ್ದದ ಪಂದ್ಯದಲ್ಲಿ ಅಕ್ಷರ್ ಪಟೇಲ್ ಅವರು ಗಾಯಕ್ಕೆ ತುತ್ತಾಗಿದ್ದರು. ನಂತರ ಏಷ್ಯಾ ಕಪ್ ಫೈನಲ್ನಲ್ಲಿ ಅಕ್ಷರ್ ಪಟೇಲ್ ಬದಲು ವಾಷಿಂಗ್ಟನ್ ಸುಂದರ್ಗೆ ಅವಕಾಶ ನೀಡಲಾಗಿತ್ತು. ಇದರ ಹೊರತಾಗಿಯೂ ಆಸ್ಟ್ರೇಲಿಯಾ ಏಕದಿನ ಸರಣಿಯಲ್ಲಿಯೂ ಅಕ್ಷರ್ ಪಟೇಲ್ ಅವರನ್ನು ಉಳಿಸಿಕೊಳ್ಳಲಾಗಿತ್ತು. ಆದರೆ, ಅವರು ಒಂದೇ ಒಂದು ಪಂದ್ಯದಲ್ಲಿಯೂ ಆಡಿರಲಿಲ್ಲ.
ಏಕದಿನ ವಿಶ್ವಕಪ್ ಟೂರ್ನಿಯ ಒಳಗೆ ಅವರು ಸಂಪೂರ್ಣ ಗುಣಮುಖರಾಗಬಹುದೆಂದು ಅಂದಾಜಿಸಲಾಗಿತ್ತು. ಆದರೆ, ಇನ್ನು ಸಂಪೂರ್ಣ ಗುಣಮುಖರಾಗದ ಕಾರಣ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಆ ಮೂಲಕ ಆಸ್ಟ್ರೇಲಿಯಾ ವಿರುದ್ದ ಏಕದಿನ ಸರಣಿಯಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರಿದ್ದ ಆರ್ ಅಶ್ವಿನ್ಗೆ ಭಾರತ ತಂಡದಲ್ಲಿ ಅವಕಾಶ ನೀಡಲಾಗಿದೆ. ಇದರೊಂದಿಗೆ ತಂಡದಲ್ಲಿ ಆಫ್ ಸ್ಪಿನ್ನರ್ ಕೊರತೆಯನ್ನು ನೀಗಿಸಲಾಗಿದೆ.
ಭಾರತದಲ್ಲಿ ಆತಿಥ್ಯದಲ್ಲಿ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 5 ರಂದು ಆರಂಭವಾಗಲಿದೆ. ಭಾರತ ತಂಡ ಅಕ್ಟೋಬರ್ 8 ರಂದು ಚೆನ್ನೈನ ಎಂಎ ಚಿದಂಬರಂ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ಎದುರು ಸೆಣಸುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಏಕದಿನ ವಿಶ್ವಕಪ್ಗೆ ಭಾರತ ಅಂತಿಮ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವಿಂದ್ರ ಜಡೇಜಾ, ಆರ್ ಅಶ್ವಿನ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಶಾರ್ದುಲ್ ಠಾಕೂರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.