ʼಕೆಜಿಎಫ್ʼ ಸಿನಿಮಾದ ಮೂಲಕ ದೇಶ, ವಿದೇಶದಲ್ಲಿ ಖ್ಯಾತಿ ಘಳಿಸಿರುವ ರಾಕಿಂಗ್ ಸ್ಟಾರ್ ಯಶ್ ಸಾಕಷ್ಟು ಸಮಯದ ಬಳಿಕ ಟಾಕ್ಸಿಕ್ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಯಶ್ ಮುಂಬೈಗೆ ತೆರಳಿದ್ದು ಈ ವೇಳೆ ಅವರ ಹೊಸ ಲುಕ್ ಪ್ರತಿಯೊಬ್ಬರ ಗಮನ ಸೆಳೆಯುತ್ತಿದೆ. ಇದು ರಾಮಾಯಣ ಸಿನಿಮಾಗಾ? ಅಥವಾ ಟಾಕ್ಸಿಕ್ ಚಿತ್ರಕ್ಕಾ? ಎಂಬ ಅನುಮಾನ ಶುರುವಾಗಿದೆ. ಆದರೆ ಯಶ್ ಅವರ ನಯಾ ಲುಕ್ ಗೆ ಪ್ರತಿಯೊಬ್ಬರು ಕ್ಲೀನ್ ಬೋಲ್ಡ್ ಆಗಿದ್ದಾರೆ.
ʼಕೆಜಿಎಫ್ 2ʼ ಚಿತ್ರ ತೆರೆಕಂಡ ಸುಮಾರು ಒಂದೂವರೆ ವರ್ಷದ ಬಳಿಕ ಯಶ್ ಅಭಿನಯದ ʼಟಾಕ್ಸಿಕ್ʼ ಸಿನಿಮಾ ಘೋಷಣೆಯಾಗಿದೆ. ಮಲೆಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್ದಾಸ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಯಶ್ ಮತ್ತು ನಯನತಾರಾ ಮೊದಲ ಬಾರಿಗೆ ಈ ಚಿತ್ರದ ಮೂಲಕ ಒಂದಾಗುತ್ತಿದ್ದಾರೆ. ಜೊತೆಗೆ ಕಿಯಾರಾ ಆಡ್ವಾಣಿ, ಹುಮಾ ಖುರೇಷಿ ಮತ್ತು ಶ್ರುತಿ ಹಾಸನ್ ಕೂಡ ಇದ್ದಾರೆ. ಇದೀಗ ಸಿನಿಮಾ ಕುರಿತು ಹೊಸ ಸಂಗತಿವೊಂದು ವೈರಲ್ ಆಗುತ್ತಿದೆ. ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಹೀರೋ ಆಗಿರವುದು ಬಿಟ್ಟರೆ ಬೇರೆ ಯಾರೆಲ್ಲಾ ಬಣ್ಣ ಹಚ್ಚಲಿದ್ದಾರೆ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿರಲಿಲ್ಲ. ಸದ್ಯ ಕೇಳಿಬಂದಿರುವ ಮಾಹಿತಿ ಪ್ರಕಾರ, ‘ಲೇಡಿ ಸೂಪರ್ ಸ್ಟಾರ್’ ನಯತಾರಾ ಅವರು ಈ ಸಿನಿಮಾದಲ್ಲಿ ಬಹುಮುಖ್ಯ ಪಾತ್ರಕ್ಕೆ ಬಣ್ಣ ಹಚ್ಚುವುದು ಕನ್ಫರ್ಮ್ ಆಗಿದೆ.
ಮಲೆಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್ದಾಸ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಆರಂಭದಲ್ಲಿ ಸಾಯಿ ಪಲ್ಲವಿ, ಸಂಯುಕ್ತಾ ಮೆನನ್ ನಾಯಕಿಯರಾಗಿತ್ತಾರೆ ಎನ್ನಲಾಗಿತ್ತು. ಅದಾದ ಬಳಿಕ ಕರೀನಾ ಕಪೂರ್ ಹೆಸರು ಕೇಳಿ ಬಂದಿತ್ತು. ಇತ್ತೀಚೆಗೆ ಬಹುಭಾಷಾ ನಟಿ ಶ್ರುತಿ ಹಾಸನ್ ಟಾಕ್ಸಿಕ್ ಚಿತ್ರದಲ್ಲಿ ಮುಖ್ಯ ಪಾತ್ರ ನಿರ್ವಹಿಸಲಿದ್ದಾರೆ ಎನ್ನುವ ಸುದ್ದಿಯೂ ಹಬ್ಬಿತ್ತು. ಇದರ ಜತೆಗೆ ಮಲಯಾಳಂ ನಟ ಟೊವಿನೋ ಥಾಮಸ್ ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸುತ್ತಾರೆ ಎನ್ನಲಾಗಿದೆ. ಆದರೆ ಚಿತ್ರತಂಡ ಇದುವರೆಗೆ ಇದ್ಯಾವುದನ್ನೂ ಅಧಿಕೃತವಾಗಿ ಹೇಳಿಕೊಂಡಿಲ್ಲ. ಬರೋಬ್ಬರಿ 170 ಕೋಟಿ ರೂಪಾಯಿ ಬಜೆಟ್ನ ಈ ಚಿತ್ರದಲ್ಲಿ ಡ್ರಗ್ ಮಾಫಿಯಾ ಬಗ್ಗೆ ಬೆಳಕು ಚೆಲ್ಲಲಿದೆ ಎಂದು ಮೂಲಗಳು ತಿಳಿಸಿವೆ. 2025ರಲ್ಲಿ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ.