ಬೆಂಗಳೂರು: “ಹಿರಿಯ ನಾಯಕರು, ಚಾಮರಾಜನಗರ ಕ್ಷೇತ್ರದ ಸಂಸದರು, ಆತ್ಮೀಯರಾದ ಶ್ರೀ ವಿ.ಶ್ರೀನಿವಾಸ್ ಪ್ರಸಾದ್ ವಿಧಿವಶರಾದ ಸುದ್ದಿ ದಿಗ್ಭ್ರಮೆ ಮೂಡಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ಅವರನ್ನು ಭೇಟಿಯಾಗಿದ್ದು, ಈಗ ಅವರು ನಮ್ಮೊಂದಿಗೆ ಇಲ್ಲ ಎನ್ನುವುದನ್ನು ನಂಬಲಾಗುತ್ತಿಲ್ಲ. ರಾಜ್ಯ ಹಾಗೂ ದೇಶದ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರು ಪ್ರಭಾವಿ ದಲಿತ ಮುಖಂಡರಾಗಿ ಗುರುತಿಸಿಕೊಂಡಿದ್ದರು.
ಅವರ ನಿಧನದಿಂದ ನಾಡು ಒಬ್ಬ ಹಿರಿಯ ನೇತಾರರನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಅವರ ಕುಟುಂಬ, ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ” ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಂಬನಿ ಮಿಡಿದಿದ್ದಾರೆ.