ಬೆಂಗಳೂರು: ಕಾಂಗ್ರೆಸ್ ಏನು ಗ್ಯಾರಂಟಿ ಕೊಟ್ಟಿದೆ, ಅದನ್ನು ಕಂಡಿಶನ್ಯಿಲ್ಲದೇ ತರಬೇಕು, ಗೋ ಹತ್ಯೆ ಕಾಯಿದೆ ಬದಲಾವಣೆ ಮಾಡಬಾರದು, ಈ ಕುರಿತಾಗಿ ಇಂದು(ಜು.4) ಫ್ರೀಡಂ ಪಾರ್ಕ್ನಲ್ಲಿ ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.
ಇನ್ನು ಇದೇ ವೇಳೆ ಮಾತನಾಡಿದ ಅವರು ‘ಕುಮಾರಸ್ವಾಮಿ ಮಾಡುತ್ತಿರುವ ಆರೋಪಗಳನ್ನು ನಾನು ಸ್ವಾಗತಿಸುತ್ತೇನೆ. ಅವರಿಗೆ ನಮ್ಮ ಪೂರ್ಣ ಬೆಂಬಲ ಇದೆ ಎಂದರು.
ಗ್ಯಾರಂಟಿ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಮಾಜಿ ಸಿಎಂ ಡಿವಿಎಸ್, ಮಾಜಿ ಸಚಿವರಾದ ಗೋಪಾಲಯ್ಯ, ಬಿ.ಸಿ.ನಾಗೇಶ್, N.ಮಹೇಶ್, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸೋಮಶೇಖರ್ ರೆಡ್ಡಿ, ಪರಿಷತ್ ಸದಸ್ಯ ಎನ್.ರವಿಕುಮಾರ್ ಸೇರಿದಂತೆ ಹಲವರು ಭಾಗಿಯಾಗಿ, ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರ ಹಾಕುತ್ತಿದ್ದಾರೆ.