ಮೈಸೂರು:- ರೈತರ ಸಾಲ ಮನ್ನಾ ಮಾಡಿ ಎನ್ನುವ ನೈತಿಕತೆ ಯಡಿಯೂರಪ್ಪಗೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲ ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಲು ಮುಂದಾಗಬೇಕು ಅಂತ ಯಡಿಯೂರಪ್ಪ ಹೇಳಿರುವುದಕ್ಕೆ ತೀಕ್ಷ್ನ ಪ್ರತಿಕ್ರಿಯೆ ನೀಡಿದರು.
ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲಮಾಡುವ ಪ್ರಸ್ತಾಪಕ್ಕೆ ಅವರು ಸರ್ಕಾರದ ಬಳಿ ನೋಟು ಮುದ್ರಿಸುವ ಮಶೀನ್ ಇದೆಯಾ? ಅಂತ ಹೇಳಿದ್ದರು. ಈಗ ಅದ್ಯಾವ ನೈತಿಕತೆಯೊಂದಿಗೆ ಅವರು ರೈತರ ಸಾಲಮಾಡಿ ಅನ್ನುತ್ತಾರೆ ಎಂದು ಸಿದ್ದರಾಮಯ್ಯ ಕೇಳಿದರು. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ರೈತರ ಸಾಲಮನ್ನಾ ಮಾಡಲಿದೆ ಎಂದು ಅವರು ಹೇಳಿದರು.