ಬೆಂಗಳೂರು ;- ಕರಾವಳಿ ಕರ್ನಾಟಕ, ಕೊಡಗಿನಲ್ಲಿ ಭಾರೀ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಡಲ ತೀರದ ಬಳಿ ಹೋಗದೇ ಇರುವಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಈ ವಾರವೀಡಿ ಕರಾವಳಿ ಕರ್ನಾಟಕದಲ್ಲಿ ಮಳೆ ಸುರಿದಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು.
ಈ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಕನಿಷ್ಠ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಆದೇಶ ಹೊರಡಿಸಿತ್ತು.
‘ಜುಲೈ 8 ಮತ್ತು 9 ರಂದು ಕರಾವಳಿಯ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ’ ಎಂದು ಹವಾಮಾನ ಇಲಾಕೆ ತಿಳಿಸಿದೆ.
ಜುಲೈ 9 ರಂದು ಕರ್ನಾಟಕ ಕರಾವಳಿಯಲ್ಲಿ 40-45 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ.
ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿರುವ ಕೊಡಗಿಗೆ ಶನಿವಾರ ಹಳದಿ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಸಂಸ್ಥೆ ಪ್ರಕಾರ, ಸೋಮವಾರದವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಇತರ ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿಲ್ಲ.