ಸಾಕಷ್ಟು ವಿವಾದದ ಮೂಲಕವೇ ತೆರೆಗೆ ಬಂದ ‘ದಿ ಕೇರಳ ಸ್ಟೋರಿ’ ಸಿನಿಮಾ ಐದೇ ದಿನಕ್ಕೆ 50 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮಧ್ಯೆ ಚಿತ್ರತಂಡವು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ, ತಮ್ಮ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿದಕ್ಕೆ ಧನ್ಯವಾದಗಳನ್ನು ತಿಳಿಸಿದೆ.
ಯೋಗಿ ಆದಿತ್ಯನಾಥ್ ಅವರನ್ನು ಚಿತ್ರದ ನಿರ್ದೇಶಕ ಸುದಿಪ್ತೊ ಸೇನ್, ನಿರ್ಮಾಪಕ ವಿಫುಲ್ ಅಮೃತ್ ಲಾಲ್ ಶಾ ಹಾಗೂ ನಟಿ ಅದಾ ಶರ್ಮಾ ಭೇಟಿ ಮಾಡಿದ್ದಾರೆ. ಚಿತ್ರತಂಡಕ್ಕೆ ಉತ್ತರ ಪ್ರದೇಶ ಸರಕಾರದಿಂದ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಆದಿತ್ಯನಾಥ್ ತಿಳಿಸಿದ್ದಾರೆ. ಹೀಗಾಗಿ ಚಿತ್ರತಂಡಕ್ಕೆ ಆನೆಬಲ ಬಂದಂತಾಗಿದೆ. ಈ ಖುಷಿಯನ್ನು ಚಿತ್ರತಂಡ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.
ಆದಿತ್ಯ ನಾಥ್ ಚಿತ್ರತಂಡಕ್ಕೆ ವಿನಾಯಿತಿ ನೀಡಿದ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಚಿತ್ರತಂಡಕ್ಕೆ ಶಾಕ್ ಕೂಡ ನೀಡಿದೆ. ಪಶ್ಚಿಮ ಬಂಗಾಳ ನಿಷೇಧಿಸಿರುವುದು ಹಾಗೂ ತಮಿಳುನಾಡಿನಲ್ಲಿ ನಿಷೇಧಕ್ಕೆ ಮುಂದಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.