ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಶಾಸ್ತ್ರೋಕ್ತವಾಗಿ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬೆಳ್ಳಿ ರಾಮಮಂದಿರ ಪ್ರತಿರೂಪವನ್ನು ಉಡುಗೊರೆಯಾಗಿ ನೀಡಿದರು. ಇದಕ್ಕೂ ಮುನ್ನ ಗೋವಿಂದ್ ದೇವ್ ಗಿರಿ ಜಿ ಮಹಾರಾಜ್ ಸ್ವಾಮೀಜಿ ಮೋದಿಗೆ ಶಾಲು ಹೊದಿಸಿ ಗೌರವಿಸಿದರು.