ಬೆಂಗಳೂರು:- CET ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಲಾಗಿದ್ದು, ಮಾರ್ಚ್ 20ರವೆರೆಗೂ ಅವಕಾಶ ನೀಡಲಾಗಿದೆ.
ಏಪ್ರಿಲ್ 18 ಮತ್ತು 19ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ದೊರೆತಿದೆ. ಮಾರ್ಚ್ 20ರ ಬುಧವಾರ ರಾತ್ರಿ 12 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಶುಲ್ಕ ಪಾವತಿಸಲು ಮಾರ್ಚ್ 21ರ ಸಂಜೆ 5.30ರವರೆಗೆ ಕಾಲಾವಕಾಶ ನೀಡಲಾಗಿದೆ.
ಇನ್ನೂ ಅರ್ಜಿ ಸಲ್ಲಿಸದೇ ಇರುವವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೊಂದು ಶುಭ ಸುದ್ದಿಯನ್ನು ನೀಡಿದ್ದು, CET ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಲಾಗಿದೆ ಮತ್ತು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ಮಾರ್ಚ್ 20ರ ಬುಧವಾರ ರಾತ್ರಿ 12 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಶುಲ್ಕ ಸಲ್ಲಿಸಲು ಮಾರ್ಚ್ 21ರ ಸಂಜೆ 5.30ರವರೆಗೆ ಕಾಲಾವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಈಗಾಗಲೇ 3,75,399 ವಿದ್ಯಾರ್ಥಿಗಳು ಸಿಇಟಿಗೆ ನೋಂದಾಯಿಸಿಕೊಂಡಿದ್ದಾರೆ. 3,44,883 ವಿದ್ಯಾರ್ಥಿಗಳು ಶುಲ್ಕ ಪಾವತಿಸಿದ್ದಾರೆ. ಇದು ಕಳೆದ ವರ್ಷಕ್ಕಿಂತ ಒಂದು ಲಕ್ಷ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡಂತಾಗಿದೆ ಎಂದು ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ .