ಹಾಸನ:- ಕೆರೆಯಲು ಈಜಲು ಹೋಗಿ ಅವಘಡ ಸಂಭವಿಸಿ ಬಳಿಕ ನೀರಿನಿಂದ ಹೊರಬರಲಾರದೆ ಇಬ್ಬರು ಸಾವನ್ನಪ್ಪಿದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಜಿನ್ನಾಪುರ ಗ್ರಾಮದಲ್ಲಿ ಕೆರೆಯಲ್ಲಿ ಜರುಗಿದೆ.
29 ವರ್ಷದ ಗಣೇಶ್, ರೋಹಿತ್ ಮೃತರು. ಮೃತ ಗಣೇಶ್ ಮತ್ತು ರೋಹಿತ್ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಭಾನುವಾರ ಕೆಲಸ ಮುಗಿಸಿ ಇಬ್ಬರು ಸಂಜೆ ಕೆರೆಗೆ ಈಜಲು ತೆರಳಿದ್ದರು. ಇಬ್ಬರಿಗೂ ಈಜು ಗೊತ್ತಿದ್ದರಿಂದ ಮೊದಲು ರೋಹಿತ್ ಕೆರೆಗೆ ಧುಮುಕಿದ್ದಾನೆ. ಈ ವೇಳೆ ಕೆರೆಯಲ್ಲಿ ಬೆಳೆದಿದ್ದ ಬಳ್ಳಿಗಳು ರೋಹಿತ್ ಕಾಲಿಗೆ ಸುತ್ತಿಕೊಂಡಿದೆ.
ರೋಹಿತ್ ಕೆರೆಯಿಂದ ಮೇಲೆ ಬರಲಾರದೇ ಕಾಪಾಡಿ ಎಂದು ಕಿರುಚಿದ್ದಾನೆ. ಈ ವೇಳೆ ಗೆಳೆಯನನ್ನು ರಕ್ಷಿಸಲು ಯಶ್ವಂತ್ ಸಿಂಗ್ ಕೆರೆಗೆ ಜಿಗಿದ್ದಾನೆ. ಈ ವೇಳೆ ಈ ಅವಘಡ ಸಂಭವಿಸಿದೆ.