ಬೀದರ್ (ಏ.22): ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಾವಗಿ ಗ್ರಾಮದ ವಿವಿಧ ಪಕ್ಷಗಳ ನೂರಾರು ಜನ ಯುವಕರು, ಮಹಿಳೆಯರು, ಮುಖಂಡರು, ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಬೀದರ್ ನಗರದ ಒಲ್ಡ್ ಸಿಟಿ (ಹಳೆ ಸರ್ಕಾರಿ ಆಸ್ಪತ್ರೆ ಹತ್ತಿರ) ಯ ತಮ್ಮ ನಿವಾಸದ ಆವರಣದಲ್ಲಿ ಬಾವಗಿ ಗ್ರಾಮದ ವಿವಿಧ ಪಕ್ಷಗಳ ಪ್ರಮುಖರು, ನೂರಾರು ಜನ ಯುವಕರು, ಮಹಿಳೆಯರು, ಮುಖಂಡರಿಗೆ ಶನಿವಾರ ಜೆಡಿಎಸ್ ಶಾಲು ಹೊದಿಸಿ, ಪಕ್ಷದ ಧ್ವಜ ನೀಡುವ ಮೂಲಕ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡರು.
ಈ ವೇಳೆ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಜೆಡಿಎಸ್ ಪಕ್ಷದ ಜನಪರ ಕೆಲಸಗಳನ್ನು ಮೆಚ್ಚಿ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ನಮ್ಮ ಪಕ್ಷ ಬಡವರ, ರೈತರ, ಶ್ರಮಿಕರ ಪರವಾಗಿ ಕೆಲಸ ಮಾಡುವ ಪಕ್ಷವಾಗಿದೆ. ನಾವು ಅಧಿಕಾರದಲ್ಲಿ ಇದ್ದಾಗಲೆಲ್ಲಾ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಮುಂದೆಯೂ ಅನೇಕ ಮಹತ್ವದ ಯೋಜನೆಗಳನ್ನು ಜಾರಿಗೆ ತರಲಿದ್ದೇವೆ ಎಂದರು.
ಜೆಡಿಎಸ್ ಪಕ್ಷದ ಜನಪ್ರಿಯ ಯೋಜನೆಗಳು, ಕಾರ್ಯಕ್ರಮಗಳ ಬಗ್ಗೆ ಮನೆಮನೆಗೆ ಮಾಹಿತಿ ನೀಡುವ ಕೆಲಸವನ್ನು ತಳಮಟ್ಟದಿಂದ ಮಾಡಬೇಕಾಗಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಆ ನಿಟ್ಟಿನಲ್ಲಿ ಕೆಲಸ ಮಾಡುವಂತೆ ನಾನು ಅನೇಕ ಬಾರಿ ತಿಳಿಸಿದ್ದೇನೆ. ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಪಕ್ಷಕ್ಕೆ ಬಲ ನೀಡುತ್ತದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.ಈ ಸಂದರ್ಭದಲ್ಲಿ ನೂತನವಾಗಿ ಜೆಡಿಎಸ್ ಸೇರಿದ ಬಾವಗಿ ಗ್ರಾಮದ ಬಸವರಾಜ್, ಮಾಣಿಕ್, ಹಣುಮಂತ, ಮುಖಂಡರಾದ ಅನಿಲಕುಮಾರ್ ಪಾಟೀಲ್, ಹಣುಮಂತ ಬಾವಗಿ ಸೇರಿದಂತೆ ಮುಖಂಡರು, ಮಹಿಳೆಯರು, ಯುವಕರು, ಕಾರ್ಯಕರ್ತರು ಇದ್ದರು.