ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ರೆಡ್ಡಿ ಸಹೋದರಿ, ವೈಎಸ್ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ಇಂದು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ನಿನ್ನೆ ರಾತ್ರಿ ಅವರು ದೆಹಲಿಗೆ ಹೋಗಿದ್ದಾರೆ.
ಅತ್ಯಂತ ಶ್ರೇಷ್ಠ ವ್ಯಕ್ತಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ನಿನ್ನೆ ಕಾಂಗ್ರೆಸ್ ಹೇಳಿತ್ತು. ಇದರ ಮಧ್ಯೆ ದೆಹಲಿ ಏರ್ಪೋರ್ಟ್ನಲ್ಲಿ ಮಾಧ್ಯಮಗಳಿಗೆ ಶರ್ಮಿಳಾ ಎದುರಾಗಿದ್ದರು. ಈ ವೇಳೆ ನೀವು ಕಾಂಗ್ರೆಸ್ ಸೇರುವ ಸೂಚನೆ ಸಿಗುತ್ತಿದೆ ಎಂದು ಶರ್ಮಿಳಾ ಬಳಿ ಪ್ರಶ್ನೆ ಮಾಡಿದ್ದರು. ಅದಕ್ಕೆ ಹೌದು ಎಂದು ಹೇಳಿದ್ದರು.
ಹೈದರಾಬಾದ್ನಲ್ಲಿ ಪಕ್ಷದ ನಾಯಕರ ಜೊತೆ ಮಾತುಕತೆ ನಡೆಸಿದ ಬಳಿಕ ಕಾಂಗ್ರೆಸ್ ಮುಖ್ಯಸ್ಥರಾದ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಿ ಪಕ್ಷ ಸೇರುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಶರ್ಮಿಳಾ ಅವರು ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ್ ರೆಡ್ಡಿ ಅವರ ಪುತ್ರಿ ಆಗಿದ್ದಾರೆ. ಇವರ ಸಹೋದರ ವೈಎಸ್ ಜಗನ್ ರೆಡ್ಡಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಆಗಿದ್ದಾರೆ. ತೆಲಂಗಾಣದಲ್ಲಿ ಇತ್ತೀಚೆಗೆ ವಿಧಾನಸಭೆ ಚುನಾವಣೆ ನಡೆದಿತ್ತು. ಈ ವೇಳೆ ಅವರು ಕಾಂಗ್ರೆಸ್ಗೆ ತಮ್ಮ ಬೆಂಬಲವನ್ನು ಘೋಷಣೆ ಮಾಡಿದ್ದರು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶರ್ಮಿಳಾ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ.