ಬೆಂಗಳೂರು:- ಯುವನಿಧಿ ಯೋಜನೆಗೆ ಬರೊಬ್ಬರಿ 6062 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಪದವಿ ಹಾಗೂ ಡಿಪ್ಲೊಮಾ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಯಾವುದೇ ಅಡಚಣೆ ಇಲ್ಲದೆ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ತಿಳಿಸಿದೆ.
ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದಿರಬೇಕು. ಅದೇ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು 6 ತಿಂಗಳು ಪೂರೈಸಿರಬೇಕು. ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸೇರಿದವರು ಕೂಡ ಅರ್ಜಿ ಸಲ್ಲಿಸಬಹುದು. ಯಾವುದೇ ಉದ್ಯೋಗಕ್ಕೆ ಸೇರದೆ ಇರುವವರು ಅರ್ಹರಾಗುತ್ತಾರೆ. ಪದವಿ ಮತ್ತು ಡಿಪ್ಲೋಮಾ ತೇರ್ಗಡೆ ಆದವರಿಗೆ ಮಾತ್ರ ಇಲ್ಲಿ ಅವಕಾಶವಿದೆ.
ಇನ್ನು ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ಆರ್ಥಿಕ ನೆರವು. ಹಾಗೂ ಡಿಪ್ಲೋಮಾ ಪೂರೈಸಿದವರಿಗೆ ಮಾಸಿಕ 1,500 ರೂ. ಆರ್ಥಿಕ ನೆರವು ಸಿಗಲಿದೆ. ಯುವನಿಧಿ ಯೋಜನೆಗೆ ಪ್ರಸಕ್ತ ಸಾಲಿ ವರ್ಷದಲ್ಲಿ 250 ಕೋಟಿ ರೂ. ಹಾಗೂ ಮುಂದಿನ ವರ್ಷಕ್ಕೆ 1,250 ಕೋಟಿ ರೂ. ವೆಚ್ಚ ತಗುಲಲಿದೆ.