ವರನಟ ಡಾ. ರಾಜ್‌ಕುಮಾರ್ ಕುಟುಂಬದ ಕುಡಿ ಯುವ ರಾಜ್‌ಕುಮಾರ್ ಚಿತ್ರರಂಗಕ್ಕೆ ಎಂಟ್ರಿ ಕೊಡಲು ವೇದಿಕೆ ಸಜ್ಜಾಗಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶನದ ಯುವರಾಜ್ ಕುಮಾರ್ ನಟನೆಯ ಹೊಸ ಸಿನಿಮಾಗೆ ನಾಯಕಿ ಯಾರು ಎಂಬ ಕುತೂಹಲಕ್ಕೆ ಇದೀಗ ತೆರೆಬಿದ್ದಿದೆ.
ಡಾ.ರಾಜ್ ಕುಮಾರ್ ಬಳಿಕ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್, ಧೀರೇನ್ ಹಾಗೂ ಧನ್ಯಾ ಬಳಿಕ ಇದೀಗ ಯುವರಾಜ್ ಕುಮಾರ್ ಕೂಡ ಬಣ್ಣದ ಬದುಕಿನಲ್ಲಿ ಸದ್ದು ಮಾಡಲು ರೆಡಿಯಾಗಿದ್ದಾರೆ. ಇದಕ್ಕಾಗಿ ಯುವ ತೆರೆ ಮರೆಯಲ್ಲಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ.
ಪುನೀತ್ ರಾಜ್‌ಕುಮಾರ್ ಅವರ ಹುಟ್ಟಿದ ಹಬ್ಬ (ಮಾ.17)ದಂದು ಯುವ ಚೊಚ್ಚಲ ಸಿನಿಮಾ ಟೀಸರ್ ರಿಲೀಸ್ ಎಂದು ಹೇಳಲಾಗುತ್ತಿದೆ. ಈ ಸುದ್ದಿ ಬೆನ್ನಲ್ಲೇ ಈ ಚಿತ್ರದ ನಾಯಕಿ ಬಗ್ಗೆ ಅಪ್‌ಡೇಟ್ ಸಿಕ್ಕಿದೆ. `ಬೀರ್‌ಬಲ್’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ನಟಿ ರುಕ್ಮಿಣಿ ವಸಂತ್ ಯುವ ನಟನೆಯ ಚೊಚ್ಚಲ ಸಿನಿಮಾಗೆ ನಾಯಕಿಯಾಗುವ ಸಾಧ್ಯತೆ ಇದೆ.
ಬಾನದಾರಿಯಲ್ಲಿ, ಭಘೀರ, `ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಗಳಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಬೆನ್ನಲ್ಲೇ ಯುವ ಚಿತ್ರಕ್ಕೂ ನಟಿಸಲು ರುಕ್ಮಿಣಿಗೆ ಆಫರ್ ನೀಡಲಾಗಿದೆಯಂತೆ. ಈಗಾಗಲೇ ರುಕ್ಮಿಣಿ ಜೊತೆ ಒಂದು ಹಂತದ ಮಾತುಕತೆಯಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.