ಬೆಂಗಳೂರು: ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿಯನ್ನ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಜೊತೆಗೆ ಮಧ್ಯಮಾವಧಿ, ದೀರ್ಘಾವಧಿ ಸಾಲ ಮಿತಿಯನ್ನ 10 ಲಕ್ಷದಿಂದ 15 ಲಕ್ಷಕ್ಕೆ ಏರಿಸಲಾಗಿದ್ದು, ಗುಡ್ಡಗಾಡು ಪ್ರದೇಶದ ರೈತರಗೆ ಪಿಕ್ ವ್ಯಾನ್ ಖರೀದಿಗೆ 7 ಲಕ್ಷದವರೆಗೆ ಸಾಲ ನೀಡಲಾಗುವುದು.
14ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯನವರು ‘ತೆಂಗು, ಅಡಕೆ, ದ್ರಾಕ್ಷಿ, ದಾಳಿಂಬೆ ಬೆಳೆ ಸಂಸ್ಕರಣೆಗೆ 10 ಕೋಟಿ ವೆಚ್ಚದಲ್ಲಿ ಯೋಜನೆ ಜಾರಿ, ಚಿಕ್ಕಮಗಳೂರು ಕಾಫಿ, ಪ್ರವಾಸೋದ್ಯಮ ಉತ್ತೇಜನಕ್ಕೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಶಿಡ್ಲಘಟ್ಟದಲ್ಲಿ 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ. ಅನುಗ್ರಹ ಯೋಜನೆ ಮರು ಜಾರಿ ಮಾಡಿ ‘ಕುರಿ ಮೇಕೆ ಮೃತಪಟ್ಟರೆ 5 ಸಾವಿರ ರೂ. ಪರಿಹಾರ ನೀಡಲಾಗುವುದು