ಬೆಂಗಳೂರು:- ಬೆಂಗಳೂರಿಗೆ ಜೀಕಾ ಆತಂಕ ಶುರುವಾಗಿದೆ. ಬೆಂಗಳೂರಿನಲ್ಲೇ ಅತಿ ಹೆಚ್ಚು ಪ್ರಕರಣ ದಾಖಲಾಗಿರುವುದು ಆರೋಗ್ಯ ಇಲಾಖೆಯ ಆತಂಕಕ್ಕೆ ಕಾರಣ ಆಗಿದ್ದು, ಗರ್ಭಿಣಿಯರ ಮೇಲೆ ಆರೋಗ್ಯ ಇಲಾಖೆ ಹೆಚ್ಚಿನ ನಿಗಾ ಇಡುತ್ತಿದೆ. ಪ್ರತ್ಯೇಕ ಸ್ಕ್ರೀನಿಂಗ್ ವ್ಯವಸ್ಥೆ ಕೂಡ ಮಾಡಿದೆ.
ಬೆಂಗಳೂರಿನ ಜಿಗಣಿಯಲ್ಲಿ ಗರ್ಭಿಣಿ ಸೇರಿದ ಹಾಗೇ 6 ಮಂದಿಯಲ್ಲಿ ಜಿಕಾ ಪತ್ತೆಯಾಗಿದ್ದು ಇಬ್ಬರು ಗುಣಮುಖರಾಗಿದ್ದರೆ, ನಾಲ್ವರಿಗೆ ಚಿಕಿತ್ಸೆ ಮುಂದುವರಿದಿದೆ. ನಾಲ್ವರಲ್ಲಿ ಮೂವರು ಗರ್ಭಿಣಿಯರೇ ಆಗಿದ್ದು, ಎಚ್ಚರಿಕೆ ವಹಿಸುವಂತೆ ಆರೋಗ್ಯ ಸಚಿವರು ಸೂಚನೆ ನೀಡಿದ್ದಾರೆ.
ಜಿಕಾ ವೈರಸ್ ಮಗುವಿನ ಬ್ರೈನ್ ಬೆಳವಣಿಗೆಗೆ ಸಮಸ್ಯೆಗೆ ಕಾರಣ ಆಗುತ್ತದೆ ಎಂಬ ಕಾರಣ ಇಲಾಖೆ ಗರ್ಭಿಣಿಯರ ಪ್ರತ್ಯೇಕ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕೂಡಾ ಮಾಡಲು ತಯಾರಿ ನಡೆಸುತ್ತಿದೆ.
ಜಿಕಾ ವೈರಸ್ಗೆ ನಿಗದಿತ ಚಿಕಿತ್ಸೆ ಆಗಲಿ, ಲಸಿಕೆಯಾಗಲಿ ಇಲ್ಲ. ಈ ವೈರಸ್ ಗರ್ಭಿಣಿಯರಿಗೆ ಹೆಚ್ಚು ಅಪಾಯವೆಂದು ಅಧ್ಯಯನದಿಂದ ಬಯಲಾಗಿದೆ. ಹಾಗಾಗಿ ಮುಂಜಾಗ್ರತಾ ಕ್ರಮ ವಹಿಸುವುದು ಅಗತ್ಯ ಎಂದು ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಇಂದಿರಾ ಕಬಾಡೆ ತಿಳಿಸಿದ್ದಾರೆ.
ಗರ್ಭಾವಸ್ಥೆಯಲ್ಲಿ ಅಥವಾ ಹೆರಿಗೆಯ ಸಮಯದಲ್ಲಿ ಸೋಂಕಿತ ತಾಯಿಯಿಂದ ಮಗುವಿಗೆ ಈ ವೈರಸ್ ವರ್ಗಾವಣೆ ಆಗುತ್ತದೆ. ರ್ಭಾವಸ್ಥೆಯಲ್ಲಿ ತಾಯಿಗೆ ಜಿಕಾ ಬಂದರೆ ಮಗು ಮೈಕ್ರೋಸೆಫಾಲಿ ರೋಗಕ್ಕೆ ತುತ್ತಾಗುವ ಸಾಧ್ಯತೆ ಇರುತ್ತದೆ. ರೋಗದಲ್ಲಿ, ಶಿಶುಗಳಿಗೆ ಸಣ್ಣ ತಲೆ ಮತ್ತು ಮೆದುಳಿನ ಸಮಸ್ಯೆ ಉಂಟಾಗುತ್ತದೆ, ಹಾಗಾಗಿ ಎಚ್ಚರ ವಹಿಸುವುದು ಅನಿವಾರ್ಯ.
ಗರ್ಭಿಣಿಯರು ಏನು ಎಚ್ಚರಿಕೆ ವಹಿಸಬೇಕು?
ಸೊಳ್ಳೆ ನಿವಾರಕಗಳನ್ನು ಬಳಸುವುದು.
ಉದ್ದನೆಯ ತೋಳಿನ ಬಟ್ಟೆಗಳನ್ನು ಧರಿಸುವುದು, ನಿಂತ ನೀರನ್ನು ಕ್ಲೀನ್ ಮಾಡುತ್ತಾ ಇರುವುದು.
ಗರ್ಭವತಿಯರು ಇರುವ ಕಡೆ ಸೊಳ್ಳೆ ಉತ್ಪತ್ತಿ ತಾಣ ಆಗದಂತೆ ನೋಡಿ ಕೊಳ್ಳುವುದು.
ರಕ್ತ ತಪಾಸಣೆ ಮಾಡಬೇಕು.
2 ದಿನಕ್ಕಿಂತ ಹೆಚ್ಚು ಜ್ವರ ಕಂಡು ಬಂದರೆ ವೈದ್ಯರ ಬಳಿ ತಪಾಸಣೆ ಮಾಡಿ ಕೊಳ್ಳಬೇಕು.