ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಕೇಸ್ ಟ್ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ “ವಿಧಾನಸೌಧದ ಒಳಗೆ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಎಫ್ಎಸ್ಎಲ್ ವರದಿಯಲ್ಲಿ ಬಹಿರಂಗವಾಗಿದೆ.
ಕಾಂಗ್ರೆಸ್ಸಿಗರೇ ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ್ರು ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನೇ ವರದಿ ಬಹಿರಂಗಪಡಿಸಿದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದರು ನಾಜೀರ್ ಸಾಬ್ ಜಿಂದಾಬಾದ್ ಎಂದು ತಿರುಚಿ ಹಾಕಲು ಹುನ್ನಾರ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ FSL ವರದಿಯಲ್ಲಿ ಬಯಲು ರಾಜ್ಯ ಕಾಂಗ್ರೆಸ್, ಸುಳ್ಳು ಸುದ್ದಿ ಕಾರ್ಖಾನೆ ಮುಖ್ಯಸ್ಥ ಪ್ರಿಯಾಂಕ್ ಈಗಲಾದ್ರೂ ತಮ್ಮ ದೇಶದ್ರೋಹದ ಕೃತ್ಯ ಒಪ್ಪಿಕೊಂಡು ಕ್ಷಮೆ ಕೇಳಲಿ ವಿಧಾನಸೌಧ ಬಳಿ ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೇಳಲಿ ಟ್ವಿಟ್ ಮೂಲಕ ಕಾಂಗ್ರೆಸ್ ನಾಯಕರಿಗೆ ರಾಜ್ಯ BJP ಘಟಕ ಆಗ್ರಹ ಮಾಡಿದೆ.
“ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ರಾಷ್ಟ್ರ ವಿರೋಧಿ ಧೋರಣೆಯ ಕಾಂಗ್ರೆಸ್ ಹಾಗೂ ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು” ಎಂದು ಆಗ್ರಹಿಸಿದೆ.