ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ನಿನ್ನೆ 106 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕೋವಿಡ್ 19 ಸಕ್ರಿಯ ಪ್ರಕರಣಗಳ ಸಂಖ್ಯೆ 344ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಗುಣಮುಖರಾಗಿ 33 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಾದ್ಯಂತ ಭಾನುವಾರ ಒಟ್ಟು 1,441 ಮಂದಿಗೆ ಕೋವಿಡ್ 19 ತಪಾಸಣೆ (RTPCR – 1,135 , RAT – 306) ನಡೆಸಲಾಗಿದ್ದು, ಈ ಪೈಕಿ 106 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ 95, ಚಾಮರಾಜನಗರ 1, ದಕ್ಷಿಣ ಕನ್ನಡ 2, ಮಂಡ್ಯ 1, ಮೈಸೂರು 6, ಶಿವಮೊಗ್ಗದಲ್ಲಿ 1 ಪ್ರಕರಣ ಪತ್ತೆಯಾಗಿದೆ.
ಒಟ್ಟು ಸಕ್ರಿಯ ಪ್ರಕರಣಗಳು 344 ಇದ್ದರೆ, ಈ ಪೈಕಿ ಬೆಂಗಳೂರಿನಲ್ಲೇ 297 ಪ್ರಕರಣಗಳು ಇವೆ. ಈ ಪೈಕಿ 323 ಮಂದಿ ಹೋಮ್ ಐಸೋಲೇಶನ್ನಲ್ಲಿದ್ದು, ಆಸ್ಪತ್ರೆಯಲ್ಲಿ 21 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿಇದೆ ನಿನ್ನೆ ಕೊರೊನಾ ಪಾಸಿಟಿವಿಟಿ ದರ ಶೇ. 7.35 ಇದೆ.