ಯಾಮಿ ಗೌತಮಿ ನಟನೆಯ ಆರ್ಟಿಕಲ್ 370 ಸಿನಿಮಾ ಸೂಪರ್ ಹಿಟ್ ಆಗಿದೆ. ಕಲೆಕ್ಷನ್ ನಲ್ಲಿ ಕಮಾಲ್ ಮಾಡುತ್ತಿರುವ ಸಿನಿಮಾವನ್ನು ಗಲ್ಫ್ ರಾಷ್ಟ್ರಗಳಲ್ಲಿ ಬ್ಯಾನ್ ಮಾಡಲಾಗಿದೆ. ಈ ಹಿಂದೆ ದೀಪಿಕಾ ಪಡುಕೋಣೆ ಹಾಗೂ ಹೃತಿಕ್ ರೋಷನ್ ನಟನೆಯ ಫೈಟರ್ ಸಿನಿಮಾವನ್ನೂ ಬ್ಯಾನ್ ಮಾಡಲಾಗಿತ್ತು. ಇದೀಗ ಮತ್ತೊಂದು ಭಾರತೀಯ ಚಿತ್ರವನ್ನು ಬ್ಯಾನ್ ಮಾಡಲಾಗಿದೆ.
ಆರ್ಟಿಕಲ್ 370 ಸಿನಿಮಾವನ್ನು ಬಿಡುಗಡೆ ತಡೆ ಹಿಡಿದಿದೆ. ಹೀಗಾಗಿ ಗಲ್ಫ್ ರಾಷ್ಟ್ರಗಳಲ್ಲಿ ಈ ಸಿನಿಮಾ ರಿಲೀಸ್ ಆಗಿಲ್ಲ. ಇದೇ ಶುಕ್ರವಾರ ಆರ್ಟಿಕಲ್ 370 ಸಿನಿಮಾ ವಿಶ್ವದಾದ್ಯಂತ ಬಿಡುಗಡೆ ಆಗಿದ್ದು, ಪ್ರೇಕ್ಷಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕೇವಲ ನೋಡುಗರು ಮಾತ್ರವಲ್ಲ, ವಿಮರ್ಶಕರೂ ಕೂಡ ಸಿನಿಮಾದ ಬಗ್ಗೆ ಹೊಗಳಿ ಬರೆದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೂ ಚಿತ್ರದ ಕುರಿತು ಉತ್ತಮ ರೆಸ್ಪಾನ್ಸ್ ಬರ್ತಿದೆ. ಆದರೆ ಗಲ್ಫ್ ರಾಷ್ಟಗಳಲ್ಲಿ ಮಾತ್ರ ಚಿತ್ರವನ್ನು ಬ್ಯಾನ್ ಮಾಡಲಾಗಿದೆ.
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಆರ್ಟಿಕಲ್ 370 ಚಿತ್ರದ ಬಗ್ಗೆ ತಮ್ಮ ಭಾಷಣದಲ್ಲಿ ಉಲ್ಲೇಖ ಮಾಡಿದ್ದರು. ಕಾಶ್ಮೀರದಲ್ಲಿ ನಡೆದ ಕಾರ್ಯಮಕ್ರದಲ್ಲಿ ಮೋದಿ, ‘ಆರ್ಟಿಕಲ್ 370 ಸಿನಿಮಾ ಜಮ್ಮು ಕಾಶ್ಮೀರದ ವಿಶೇಷ ಅಧಿಕಾರವನ್ನು ಯಾಕೆ ತೆಗೆಯಲಾಯಿತು ಎನ್ನುವುದನ್ನು ಸ್ಪಷ್ಟವಾಗಿ ತಿಳಿಸುತ್ತದೆ ಎಂದು ಹೇಳಿದ್ದರು