ಬೆಂಗಳೂರು:- ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1 ಲಕ್ಷಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಆದೇಶ ಹೊರಡಿಸಿದೆ.
ಇದೊಂದು ಐತಿಹಾಸಿಕ ಸಂದರ್ಭವಾಗಿರುವುದರಿಂದ ಸುವರ್ಣ ಮಹೋತ್ಸವ ಪ್ರಶಸ್ತಿಯ ಮೊತ್ತವನ್ನು 50 ಸಾವಿರದಿಂದ 1 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಗುರುವಾರ ಮಾಹಿತಿ ನೀಡಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ರಾಜ್ಯೋತ್ಸವದ ದಿನವಾದ ಇಂದು ಈ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. 100 ಸಾಧಕರು ಈ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.
ಇದಕ್ಕೆ ಕಾರಣಕರ್ತರಾದ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಶಿವರಾಜ ತಂಗಡಗಿ ಹೇಳಿದ್ದಾರೆ.